ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಭವಿಸಿದ ಸರಣಿ ರೈಲು ದುರಂತದಲ್ಲಿ ವೇಣೂರಿನ ಮೂವರು ಪ್ರಯಾಣಿಕರು ಸಿಲುಕಿದ್ದು, ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ.

ವೇಣೂರಿನ ಮಮತಾ ಪ್ರಸಾದ್ ಜೈನ್,ಆಶಾ ಜೈನ್, ದೀಪಶ್ರೀ ಕತ್ತೋಡಿ ವೇಣೂರು ಇವರು ಜೈನರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಗೆ ಯಾತ್ರೆ ಹೊರಟಿದ್ದರು.

ಈ ಮೂವರು ವೇಣೂರಿನಿಂದ ಕಳಸಕ್ಕೆ ತೆರಳಿ ಕಳಸದಿಂದ 110 ಜನ ಯಾತ್ರಿಗಳು ಬಸ್ಸಿನ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ರೈಲಿನ ಮೂಲಕ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.

ಇನ್ನು ಅಪಘಾತವಾದ ರೈಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 21 ಮಂದಿ ಇದ್ದರು ಎಂದು ತಿಳಿದು ಬಂದಿದೆ.

By admin

Leave a Reply

Your email address will not be published. Required fields are marked *

error: Content is protected !!