ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ದಾರುಣವಾಗಿ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ.

ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್  ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿದ್ದಾರೆ.

ಮಾನವೀಯತೆ ಮೆರೆದ ಖಾಸಗಿ ಬಸ್ ಸಿಬ್ಬಂದಿ:

ಅಪಘಾತ ನಡೆದಿರುವುದನ್ನು ಗಮನಿಸಿದ ಅದೇ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿ ಇಬ್ಬರನ್ನು ತಕ್ಷಣವೇ ಬಸ್ ನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೂ ಜೀವ ಉಳಿಸಲಾಗಿಲ್ಲ.

By admin

Leave a Reply

Your email address will not be published. Required fields are marked *

error: Content is protected !!