ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ವೊಂದರಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಕಾರ್ತಿಕ್ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!