ನವದೆಹಲಿ, ಜು 12: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣ ಇನ್ನೂ ಮಾಸದೇ ಇರುವಾಗಲೇ ದೆಹಲಿಯಲ್ಲಿ ಇದಕ್ಕೆ ಹೋಲಿಕೆ ಇರುವಂತೆಯೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹ ಪತ್ತೆಯಾಗಿದೆ.

ದೆಹಲಿ ಪೊಲೀಸರು ಇಂದು ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ಪತ್ತೆ ಮಾಡಿದ್ದು, ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ಹಾಕಲಾಗಿದೆ.

ಪ್ರಸ್ತುತ ದೇಹದ ತುಂಡುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ನ ಲಿವ್ ಇನ್​ ರಿಲೇಷನ್ ಸಂಗಾತಿಯಾಗಿದ್ದ ಅಫ್ತಾಬ್ ಪೂನಾವಾಲಾ ಎಂಬಾತ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​ ಒಳಗೆ ಶೇಖರಿಸಿಟ್ಟು 18 ದಿನಗಳ ಕಾಲ ನಗರದ ವಿವಿಧೆಡೆ ಎಸೆದು ಬಂದಿದ್ದ.

By admin

Leave a Reply

Your email address will not be published. Required fields are marked *

error: Content is protected !!