ಮಂಗಳೂರು, ಜು.21 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ವಿವರ ಇಂತಿದೆ:

 ಅವರು ಜು.22ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 11.15ಕ್ಕೆ ನಗರದ ಜೆಪ್ಪುವಿನ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ರಿ)ದ ಆಶ್ರಯದಲ್ಲಿ ಹಮ್ಮಿಕೊಂಡಿರುವ ಶೈಕ್ಷಣಿಕ ಸಮ್ಮೇಳನ ಪ್ರಶಸ್ತಿ ಪ್ರಧಾನ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ನಗರದ ಸಕ್ರ್ಯೂಟ್ ಹೌಸ್ ಗೆ ತೆರಳುವರು. ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಶಾಲಾ ಶಿಕ್ಷಣ, ಸಾಕ್ಷರತಾ ಸಚಿವರ ಪ್ರವಾಸ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಜು.22ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
 ವಿವರ ಇಂತಿದೆ:
 ಅವರು ಜು.22ರ ಶನಿವಾರ ಬೆಳಿಗ್ಗೆ 6.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಕ್ರ್ಯೂಟ್ ಹೌಸ್‍ಗೆ ತೆರಳುವರು. 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. 11 ಗಂಟೆಗೆ ನಗರದ ಜಪ್ಪಿನ ಮೊಗರುವಿನಲ್ಲಿ ಮುಸ್ಲಿಂ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಿರುವ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ರಾತ್ರಿ 9.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು  ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಗಣಿ ಸಚಿವರ ಪ್ರವಾಸ

ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
 ವಿವರ ಇಂತಿದೆ:
 ಅವರು ಜು.22ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಉಡುಪಿಯಿಂದ ಮಂಗಳೂರು ಆಗಮಿಸಿ, ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!