ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಕುಟುಂಬಸ್ಥರೊಂದಿಗೆ ಸುಪ್ರಸ್ತಿದ್ದವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಆಶ್ಲೇಷ ಬಲಿ ಸಮರ್ಪಣೆ ಮಾಡಿದರು.

ಈ ವೇಳೆ ಅವರ ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್‌ ಶಾ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು.

ದೇಶ ವಿದೇಶಗಳಲ್ಲಿ ಪ್ರಖ್ಯಾತವಾಗಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿರುವುದು ನನಗೆ ಅ್ತೀವ ಸಂತಸ ನನಗೆ ಶ್ರೀ ದೇವರ ದರ್ಶನ ಮಾಡಿಸಿ ಸೇವೆ ನೆರವೇರಿಸಲು ಉತ್ತಮವಾದ ವ್ಯವಸ್ಥೆ ಕಲ್ಪಿಸಿಕೊಟ್ಟ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಗೆ ಧನ್ಯವಾದಗಳು ತಿಳಿಸುತ್ತೇನೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

By admin

Leave a Reply

Your email address will not be published. Required fields are marked *

error: Content is protected !!