ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಯಶಸ್ಸಿನ ಮೂಲಮಂತ್ರ ಎಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ನ ವಿಟ್ಲ ವಲಯದ ಯೋಜನಾ ನಿರ್ವಾಹಕರಾದ ಡಾ. ವಿ. ಕೆ ಹೆಗಡೆ ಹೇಳಿದರು.

ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದಲ್ಲಿ ದಿನಾಂಕ 04.08. 2023 ರಂದು ರೋಟರಿ ಕ್ಲಬ್ ವಿಟ್ಲ ಪ್ರಾಯೋಜಕತ್ವದಲ್ಲಿ ನಡೆದ ‘ವನಸಿರಿ’ ಹಾಗೂ ‘ವಿದ್ಯಾಸಿರಿ’ ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಸ್ಥೆಯ ಸೇವಾ ಕಾರ್ಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನುಡಿದರು. ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳು ಹಾಗೂ ಗಿಡಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ರೋಟರಿ ಕ್ಲಬ್ ನ ವಿಟ್ಲ ವಲಯದ ಅಧ್ಯಕ್ಷರಾದ ರೊಟೇರಿಯನ್ ಶ್ರೀ ಕಿರಣ್ ಕುಮಾರ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಪ್ರಕಾಶ್ ನಾಯಕ್ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಹಾಗೂ ಗಿಡಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ ಸ್ಥಳದಾನಿಗಳೂ ಹಿರಿಯರೂ ಆದ ಮುರುವ ನಡುಮನೆ ಮಹಾಬಲ ಭಟ್ ಭಾಗವಹಿಸಿದ್ದರು.
ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ ಎಲ್ಲರನ್ನೂ ಸ್ವಾಗತಿಸಿದರೆ ರೋಟರಿ ಕ್ಲಬ್ ವಿಟ್ಲ ದ ಕಾರ್ಯದರ್ಶಿ ಶ್ರೀ ಮೋಹನ್ ಮೈರ ಧನ್ಯವಾದ ಅರ್ಪಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ವಿವಿಧ ಪದಾಧಿಕಾರಿಗಳು , ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿ ವೃಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಶಾಲಾವರಣದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ವನಸಿರಿ ಕಾರ್ಯಕ್ರಮ ನಡೆಯಿತು.

By admin

Leave a Reply

Your email address will not be published. Required fields are marked *

error: Content is protected !!