ಬಂಟ್ವಾಳ: ಯುವತಿಯೋರ್ವಳು ಸ್ನಾನ ಮಾಡುತ್ತಿರುವಾಗ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.

ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬವನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ.

ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದ. ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ,ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ.

ಆದರೆ ಆತನ ಪತ್ತೆಯಾಗಿರಲಿಲ್ಲ. ಘಟನೆಯ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!