ಸುಳ್ಯ,ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಅದರಲ್ಲಿ ನಾಲ್ಕು ಮಂದಿ ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.
ಇಂದು ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಚಲಿಸಿ ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು.
ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಕಾರ್ಮಿಕರು ಗಂಭೀರ ಸ್ಥಿತಿಯಲ್ಲಿದ್ದು, ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!