ಮಂಗಳೂರು : ನಗರದ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಈಜು ಕೊಳದಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಫಳ್ನೀರ್ ನಲ್ಲಿರುವ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಬ್ಯಾಂಕ್‌ ಅಧಿಕಾರಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ. 

ಯುನಿಯನ್ ಬ್ಯಾಂಕ್ ಅಧಿಕಾರಿ ಆಗಿರುವ ಗೋಪು ಆರ್ ನಾಯರ್, ನಿನ್ನೆ ಮಂಗಳೂರಿಗೆ ಬಂದಿದ್ದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಇಂದು ನಸುಕಿನಲ್ಲಿ 4 ಗಂಟೆ ವೇಳೆಗೆ  ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದ ಇವರು ಬೆಳಗ್ಗಿನ ಹೊತ್ತಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶವ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿದ್ದು ಆತ್ಮಹತ್ಯೆಯೋ, ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದಾರೆಯೋ ಗೊತ್ತಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!