ಮಂಗಳೂರು : ತುಳುಭಾಷೆ ಹಾಗೂ ಎತ್ತಿನಹೊಳೆ ಯೋಜನೆ ಗೆ ಹೋರಾಟಕ್ಕೆ ಕರ್ನಾಟಕ ರಾಜ್ಯದಲ್ಲಿ ಪೂರ್ತಿ ಬೆಂಬಲ ಸಿಗದ ಕಾರಣ ಕಾವೇರಿ ನೀರಿಗಾಗಿ ಸೆ.29 ರಂದು ರಾಜ್ಯ ಬಂದ್ ಗೆ (Karnataka Bund) ಕನ್ನಡ ಸಂಘಟನೆಗಳ ಕರೆಕೊಟ್ಟಿದ್ದು ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ಇರುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನಿಸಲಾಗಿದೆ.

ದ.ಕ ಜಿಲ್ಲೆಯಲ್ಲಿ ಸೆ.29ರಂದು ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ. ದ.ಕ ಜಿಲ್ಲೆಯಲ್ಲಿ ಕೇವಲ ನೈತಿಕ ಬೆಂಬಲ ಮಾತ್ರ ಎಂದು ಖಾಸಗಿ ಬಸ್ ಮಾಲಕ, ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ಹೇಳಿಕೆ ನೀಡಿದ್ದಾರೆ .
ಬಂದ್, ಪ್ರತಿಭಟನೆ ಮಾಡಿ ಬಂದ್ ಗೆ ಬೆಂಬಲವನ್ನು ನೀಡೋದಿಲ್ಲ. ಎತ್ತಿನಹೊಳೆ ವಿಚಾರದಲ್ಲಿ ನಾವು ಕನ್ನಡ ಸಂಘಟನೆಗಳ ಬೆಂಬಲ ಕೇಳಿದೆವು. ಆಗ ನೀರು ಎಲ್ಲರ ಹಕ್ಕು ಎಂದು ಹೇಳಿ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಿಲ್ಲ. ಈಗಲೂ ನೀರು ಎಲ್ಲರ ಹಕ್ಕು ಎಂದು ಹೇಳಿದ್ದಾರೆ. ಎತ್ತಿನ ಹೊಳೆ ಅವೈಜ್ಞಾನಿಕ ಅಂತಾ ಗೊತ್ತಿದ್ದರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿಲ್ಲ ಎಂದರು.

ತುಳು ಭಾಷೆ ವಿಚಾರದ ಹೋರಾಟದಲ್ಲಿ ನಮಗೆ ಬೆಂಬಲ ಸಿಕ್ಕಿಲ್ಲ. ತುಳು ಭಾಷೆ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ಆದಾಗ ಆ ಭಾಗದ ಶಾಸಕರು ತಮಾಷೆ ಮಾಡಿದ್ದರು

ಹೀಗಾಗಿ ಬಂದ್ ಗೆ ನಮ್ಮ ನೈತಿಕ ಬೆಂಬಲ ಮಾತ್ರವೇ ಇದೆ. ಬಸ್ ಗಳ ಓಡಾಟವೂ ಎಲ್ಲವೂ ಅಂದು ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಖಾಸಗಿ ಬಸ್ ಮಾಲಕ,ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ಹೇಳಿಕೆ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!