Month: October 2023

ಉಡುಪಿ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರ್ ನಿಧನ

ಹಿರಿಯ  ಪತ್ರಕರ್ತ,ಸಾಹಿತಿ ,ಸಂಘಟಕ ಶೇಖರ್ ಅಜೆಕಾರ್ (54) ಅವರು ಮಂಗಳವಾರ ಅಕ್ಟೋಬರ್ 31 ರಂದು ಹೃದಯಾಘಾತದಿಂದ ನಿಧನರಾದರು. ಅವರು ದಾಯ್ಜಿವಲ್ಡ್ ನಲ್ಲಿ ಬಹಳಷ್ಟು ವರ್ಷಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮೂಲಕ ನಾಡಿನ ಗಮನ ಸೆಳೆದ ಅಜೆಕಾರು…

ಕ್ಯಾಥೊಲಿಕ್ ಸಭಾ ಮಂಗಳೂರು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಾ ಸಂಘಟನೆಯಾದ ಕ್ಯಾಥೊಲಿಕ್ ಸಭಾ ಆಯ್ಕೆಯಾಗಿದೆ. ಕಳೆದ 44 ವರ್ಷಗಳ ಸಾರ್ಥಕ ಸೇವೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ. 1ರಂದು ಮಂಗಳೂರಿನ ನೆಹರು ಮೈದಾನದಲ್ಲಿ 9:30 ಕ್ಕೆ ನಡೆಯುವ ಜಿಲ್ಲಾ ರಾಜ್ಯೋತ್ಸವ…

ಕಾಸರಗೋಡು: ಇಂದು ಖಾಸಗಿ ಬಸ್ ಮುಷ್ಕರ – ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತ

ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಖಾಸಗಿ ಬಸ್ಸು ಮುಷ್ಕರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಯಾಣಿಕರು ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ ಕೆಎಸ್ಆರ್ ಟಿಸಿ ಬಸ್ಸುಗಳು ಎಂದಿನಂತೆ…

ಹಾವು ಕಡಿತ – ಆಸ್ಪತ್ರೆಗೆ ಸಾಗಿಸುವ ವೇಳೆ ಅಪಘಾತ ವ್ಯಕ್ತಿ ಮೃತ್ಯು

ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಂಭವಿಸಿದ ಅಪಘಾತ ದಲ್ಲಿ ವ್ಯಕ್ತಿಯೋ ರ್ವ ರು ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆ ಯಲ್ಲಿ ರವಿವಾರ ರಾತ್ರಿ ನಡೆದಿದೆ. ಬೆಳ್ಳೂರು ಅದ್ವಾಲದ ಕೃಷ್ಣ (50) ಮೃತ ಪಟ್ಟವರು. ರಾತ್ರಿ ಕೃಷ್ಣ ಅವರಿಗೆ…

ಎರ್ನಾಕುಲಂನಲ್ಲಿ ಬಾಂಬ್ ಸ್ಪೋಟ: ಓರ್ವ ಸಾವು, 50ಕ್ಕೂ ಅಧಿಕ ಮಂದಿಗೆ ಗಾಯ-ಆರೋಪಿ ಶರಣು

ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿರುವ ನಡುವೆ ಇದೀಗ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನು…

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಕಿರುಕುಳ: ಆರೋಪಿಯ ಬಂಧನ

ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಮಧ್ಯಮ ವಯಸ್ಸಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದೆ. ಆರೋಪಿಯನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿ ಉದಯ ಎಡಪದವು (40) ಎಂದು…

ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ

ಉಡುಪಿ: ‘ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.“ಮನುಷ್ಯ ದ್ವೇಷವನ್ನು ಬಂಟ ಸಮುದಾಯ…

ಬೈಕ್ ಡಿಕ್ಕಿ ಶಾಲಾ ಬಾಲಕಿ ಸಾವು

ಬೆಳ್ತಂಗಡಿ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಜಿರೆ ಸಮೀಪದ ಬದನಾಜೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ ವಿದ್ಯಾರ್ಥಿನಿ ಅಂಕಿತಾ (8) ಎಂದು ಗುರುತಿಸಲಾಗಿದೆ.…

ಜಾನುವಾರುಗಳಿಗೆ ಬಸ್ ಡಿಕ್ಕಿ: ಸಾರ್ವಜನಿಕರಿಂದ ತರಾಟೆ

ಕುಂದಾಪುರದಿಂದ ಮೈಸೂರ್- ಮಂಡ್ಯ ತೆರಳುವ ಖಾಸಗಿ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು…

ಇಂದು ಚಂದ್ರಗ್ರಹಣ: ಮಧ್ಯರಾತ್ರಿ 1:5ಕ್ಕೆ ಗೋಚರ

ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳು ಬೇಗನೆ ಮುಚ್ಚಿದರೆ,…

error: Content is protected !!