ಮಂಗಳೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಮಧ್ಯಮ ವಯಸ್ಸಿನ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದೆ.

ಆರೋಪಿಯನ್ನು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿ ಉದಯ ಎಡಪದವು (40) ಎಂದು ಗುರುತಿಸಲಾಗಿದೆ.

ಮಾಣಿಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಆರೋಪಿ ಉದಯ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.
ತಕ್ಷಣ ಬಾಲಕಿ ಈ ವಿಷಯವನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇತರೆ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆರೋಪಿಯನ್ನು ಬಸ್ಸಿನಿಂದ ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ಸನ್ನು ನೇರವಾಗಿ ಪೊಲೀಸ್ ಠಾಣೆಯ ಮುಂದೆ ತಂದು ನಿಲ್ಲಿಸಲಾಗಿದ್ದು, ನಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಈ ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಸೇರಿದ್ದು, ಆರೋಪಿ ಉದಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!