ಉಡುಪಿ: ‘ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಡುಪಿಯಲ್ಲಿ ಆಯೋಜಿಸಿದ್ದ “ವಿಶ್ವ ಬಂಟರ ಸಮ್ಮೇಳನ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ. ಬಂಟ ಸಮಯದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿದ್ದಾರೆ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯ ವಿಶಿಷ್ಠ ಸಂಸ್ಕೃತಿ, ಪರಂಪರೆ ಹೊಂದಿದೆ. ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಅವರು ಹೇಳಿದರು.