ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿರುವ ನಡುವೆ ಇದೀಗ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಇನ್ನು ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್​ಷನ್​ ಸೆಂಟರ್​ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ.

ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ.

ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದು, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಆತಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಆದರೆ ಪೊಲೀಸರು ಸುಮಾರು 15 ನಿಮಿಷಗಳ ಕಾಲ ಆತನನ್ನು ವಿಚಾರಗೊಳಪಡಿಸಿದ್ದು, ಅನುಮಾನದ ಮೇಲೆ ವಶಕ್ಕೆ ತೆಗೆದುಕೊಂಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!