ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಕೇರಳ ರಾಜ್ಯವ್ಯಾಪಿ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ.

ಖಾಸಗಿ ಬಸ್ಸು ಮುಷ್ಕರದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಯಾಣಿಕರು ಖಾಸಗಿ ವಾಹನಗಳನ್ನು ಅವಲಂಬಿಸುವಂತಾಗಿದೆ ಕೆಎಸ್ಆರ್ ಟಿಸಿ ಬಸ್ಸುಗಳು ಎಂದಿನಂತೆ ಸಂಚಾರ ನಡೆಸುತ್ತಿದೆ. ಇದರಿಂದ ನಗರ ಪ್ರದೇಶಗಳಲ್ಲಿ ಮುಷ್ಕರದ ಬಿಸಿ ಹೆಚ್ಚಿನ ಪ್ರಮಾಣದಲ್ಲಿತಟ್ಟಿಲ್ಲ.

ಬೇಡಿಕೆ ಈಡೇರಿಸದಿದ್ದಲ್ಲಿ ನವಂಬರ್ 21ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಮಾಲಕರು ಮುನ್ನೆಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ರಿಯಾಯಿತಿ ಪ್ರಯಾಣ ದರ ಹೆಚ್ಚಿಸಬೇಕು , ಬಸ್ಸುಗಳಲ್ಲಿ ಕ್ಯಾಮರಾ ಅಳವಡಿಕೆ ಹಾಗೂ ಸೀಟ್ ಬೆಲ್ಟ್ ಕಡ್ಡಾಯದಿಂದ ವಿನಾಯಿತಿ ನೀಡಬೇಕು, ದೂರಮಿತಿ ನೋಡದೆ ಖಾಸಗಿ ಬಸ್ಸುಗಳ ಪರವಾನಿಗೆ ನವೀಕರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!