ಮಂಗಳೂರು :  ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ.ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ. ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ವಿದ್ಯುತ್, ರೈಲ್ವೇ ಖಾಸಗೀಕರಣ ಮಾಡಲು ಹೊರಟ ಕೇಂದ್ರ ಸರಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಖಂಡಿಸಿ ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ನಡೆಯುವ ಪ್ರಚಾರಾಂದೋಲನದ ಭಾಗವಾಗಿ ಉಳ್ಳಾಲ ತಾಲೂಕು ಮಟ್ಟದ ವಾಹನ ಪ್ರಚಾರ ಜಾಥಾವನ್ನು ಉದ್ಘಾಟಿಸುತ್ತಾ ಅವರು ಈ ಮಾತುಗಳನ್ನು ಹೇಳಿದರು.

By admin

Leave a Reply

Your email address will not be published. Required fields are marked *

error: Content is protected !!