ಉಡುಪಿ, ನ 16: ನಾಲ್ವರ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ಗುರುವಾರ ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋ ಶ ಹೊರ ಹಾಕಿದ್ದು, ಉದ್ರಿಕ್ತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಹತ್ಯೆ ನಡೆದ ಮನೆಗೆ ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಪ್ರವೀಣ್ ಚೌಗಲೆ (39)ಯನ್ನು ಪೊಲೀಸರು ಸ್ಥಳ
ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದಾರೆ.

ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆರೋಪಿ ವಿರುದ್ಧ ಆಕ್ರೋಶ ಹೊರ ಹಾಕಿ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಘೋಷಣೆ ಕೂಗಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಆತ 15 ನಿಮಿಷ ತೆಗೆದುಕೊಂಡಿದ್ದಾನೆ ನಮಗೆ 30 ಸೆಕೆಂಡು ಅವನನ್ನು ಕೊಡಿ ಎಂದ ಸಾರ್ವಜನಿಕರು.

ತೃಪ್ತಿ ನಗರ ದಲ್ಲಿ ಪೊಲೀಸರ ವಿರುದ್ಧ ಸಾರ್ವಜನಿಕರ ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಜನಾಕ್ರೋಶದ ನಡುವೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡ ಹೋಗಲಾಯಿತು. ಸ್ಥಳಕ್ಕೆ ಎಸ್ ಪಿ, ಡಿ ಸಿ ಬರಬೇಕು ಎಂದು ಸಾರ್ವಜನಿಕರ ಆಗ್ರಹಿಸಿ ರಸ್ತೆ ತಡೆ ಮೂಲಕ ಸಾರ್ವಜನಿಕರು ಪ್ರತಿಭಟಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಉಡುಪಿ ಎಸ್ಪಿ ಡಾ.ಅರುಣ್ ಕೆ, ಸ್ಥಳ ಪರಿಶೀಲನೆ ವೇಳೆ ಸ್ಥಳದಲ್ಲಿ ಜಮಾಯಿಸಿದ ಸ್ನೇಹಿತರು ಹಾಗೂ ಕುಟುಂಬಸ್ಥರು ಆರೋಪಿಗಳನ್ನು ಕರೆದೊಯ್ಯುವ ವೇಳೆ ಪೊಲೀಸ್ ವಾಹನವನ್ನು ತಡೆಯಲು ಯತ್ನಿಸಿದಾಗ ಲಾಠಿ ಚಾರ್ಜ್ ನಡೆಸಿದ್ದೇವೆ. ಗುಂಪನ್ನು ಚದುರಿಸಿ ಆರೋಪಿಯನ್ನು ವಾಪಸ್ ಕರೆದುಕೊಂಡು ಹೋಗಲಾಯಿತು. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ನಾವು ಸಮಾಜದ ಮುಖಂಡರೊಂದಿಗೆ ಚರ್ಚಿಸುತ್ತೇವೆ ಮತ್ತು ಶಾಂತಿ ಕಾಪಾಡುವಂತೆ ಸಮುದಾಯವನ್ನು ವಿನಂತಿಸುತ್ತೇವೆ ಎಂದರು.

ಮಲ್ಪೆ ಪೊಲೀಸ್ ಇನ್ಸ್‌ಪೆಕ್ಟರ್ ಗುರುನಾಥ ಹಾಡುಮನಿ ಮತ್ತು ಇಲಾಖೆಯ ಇತರ ಉನ್ನತ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದರು ಮತ್ತು ಶಾಂತಿ ಕಾಪಾಡುವಂತೆ ಮತ್ತು ಪ್ರತಿಭಟನೆಯನ್ನು ಹಿಂಪಡೆಯುವಂತೆ ಮುಖಂಡರಿಗೆ ಮನವಿ ಮಾಡಿದರು ಎಂದರು.

ನಿನ್ನೆ ಬುಧವಾರ ಪ್ರವೀಣ್ ಚೌ ಗಲೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು, ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ನೀಡಿದೆ

By admin

Leave a Reply

Your email address will not be published. Required fields are marked *

error: Content is protected !!