ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ತಂದೆ-ತಾಯಿಯ ಮೇಲೆ ಮಗ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ಳಾರೆ ಪೊಲೀಸ್‌ ರಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

    ದೇವಿಪ್ರಸಾದ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಪುತ್ರ.

    ಘಟನೆಯಲ್ಲಿ ಮಂಜುನಾಥ್ ಆಚಾರ್, ಧರ್ಮಾವತಿ ದಂಪತಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

    By admin

    Leave a Reply

    Your email address will not be published. Required fields are marked *

    error: Content is protected !!