ಅಯೋಧ್ಯೆಯ ಶ್ರೀರಾಮನ ಮಂದಿರವನ್ನು ಅಪೂರ್ಣಾವಸ್ಥೆಯಲ್ಲಿರುವಾಗ ಉದ್ಘಾಟನೆ ಮಾಡುತ್ತಿರುವುದು ಧರ್ಮಶಾಸ್ತ್ರಕ್ಕೆ ಮಾಡಿದ ಅಪಚಾರವಾಗಿದೆ ಎಂದು ಹಿಂದೂ ಮಹಾಸಭಾ ಕರ್ನಾಟಕದ ಸಂಸ್ಥಾಪಕ ರಾಜೇಶ್ ಪವಿತ್ರನ್ ಹೇಳಿದರು.
ಗುರುವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ‘ಪ್ರಭು ಶ್ರೀರಾಮಚಂದ್ರನನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶ್ರೀರಾಮನ ಶಾಪ ತಟ್ಟುತ್ತದೆ. ಕರ್ನಾಟಕದಲ್ಲಿ ಆದ ಸ್ಥಿತಿಯೇ ಕೇಂದ್ರದಲ್ಲೂ ಆಗಬಹುದು’ ಎಂದರು. ರಾಮ ಜನ್ಮಭೂಮಿಯ ಮೂಲ ವಕಾಲತ್ತುದಾರರು ಹಿಂದೂ ಮಹಾಸಭಾ ಆಗಿದ್ದು, ರಾಮಮಂದಿರ ಉದ್ಘಾಟನೆಗೆ ಹಿಂದೂ ಮಹಾಸಭಾ ಹಾಗೂ ನಿರ್ಮೂಯಿ ಅಖಾಡವನ್ನು ಆಹ್ವಾನಿಸಿಲ್ಲ. ಇದು ಕೇಂದ್ರ ಸರ್ಕಾರದ ಸ್ವಾರ್ಥ ರಾಜಕಾರಣವನ್ನು ತೋರಿಸುತ್ತದೆ’ ಎಂದು ಆರೋಪಿಸಿದರು.

By admin

Leave a Reply

Your email address will not be published. Required fields are marked *

error: Content is protected !!