ಬೆಳ್ತಂಗಡಿ, ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.

ಈ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!