ನವದೆಹಲಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಕೈಕೊಟ್ಟಿದ್ದಾರೆ. ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಘರ್ ವಾಪಸಿ ಮಾಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಕಾರ್ಯತಂತ್ರ ಫಲಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ‌ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದರಿಂದ‌ ಸಿಟ್ಟಿಗೆದ್ದ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಬಳಿಕ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿ ಸೋತರೂ ವಿಧಾನಪರಿಷತ್ ಸದಸ್ಯ ಸ್ಥಾನವನ್ನು ನೀಡಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!