ಮಂಗಳೂರು, ಫೆ. 12: ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.

ಏನಿದು ಪ್ರಕರಣ?
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಮಕ್ಕಳಲ್ಲಿ ಶಿಕ್ಷಕಿ ಶಾಲಾ ಮಕ್ಕಳಿಗೆ ಹಿಂದೂ ಧರ್ಮ, ದೇವರ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಧರ್ಮ ವಿರೋಧಿ ಭಾವನೆಯನ್ನು ಮೂಡಿಸಲು ಯತ್ನ ಮಾಡಲಾಗಿದ್ದಾರೆ. ಅಲ್ಲದೆ ಅವಹೇಳನದ ವಿರುದ್ಧ ಧ್ವನಿ ಎತ್ತಿ ಪ್ರತಿಭಟಿಸಲು ನಿರ್ಧರಿಸಿದ್ದು, ಎಲ್ಲಾ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲಾ ಆವರಣದಲ್ಲಿ ಸೇರುವಂತೆ ಸಂದೇಶ ರವಾಸಿದ ಆಡಿಯೋ ವೈರಲ್ ಆಗಿತ್ತು.

ಅದರಂತೆ, ವಿದ್ಯಾರ್ಥಿಗಳ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲಾ ಆವರಣದಲ್ಲಿ ಜಮಾಯಿಸಿ ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ, ಆಡಳಿತ ಮಂಡಳಿ ಜೊತೆ ಮಾತನಾಡಿ ತೆರಳುವ ವೇಳೆ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಐವನ್ ಡಿಸೋಜಾ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು.

ವಿದ್ಯಾರ್ಥಿಗಳಿಗೆ ಹಿಂದೂ ದೇವರ ಮೇಲಿನ ನಂಬಿಕೆ ಹೋಗುವಂತೆ ಕ್ರೈಸ್ತ ಮತವನ್ನು ವೈಭವೀಕರಿಸಿ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ದ ವಿದ್ಯಾರ್ಥಿ ಪೋಷಕರಾದ ಶರತ್ ಕುಮಾರ್ ಎಂಬವವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನಿನ್ನೆ ದೂರು‌ ನೀಡಿದ್ದರು.

ಸಿಸ್ಟರ್‌ ಪ್ರಭಾ ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹಿಂದೂ ಧರ್ಮದ ವಿರುದ್ಧ ಹಿಂದೂ ದೇವರುಗಳ ಬಗ್ಗೆ, ನಮ್ಮ ದೇಶದ ಪ್ರಧಾನಿಗಳ ಬಗ್ಗೆ ಹಾಗೂ ಹಿಂದೂ ಧರ್ಮದ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ, ಹಿಂದೂ ಧರ್ಮವನ್ನು ನಿಂದಿಸಿ, ಹೀಯಾಳಿಸಿ, ತುಚ್ಛವಾಗಿ ಕೆಟ್ಟ ಶಬ್ದಗಳನ್ನು ಪ್ರಯೋಗಿಸಿದ್ದರು ಎಂದು ಆರೋಪಿಸಲಾಗಿದೆ.

By admin

Leave a Reply

Your email address will not be published. Required fields are marked *

error: Content is protected !!