ಮಂಗಳೂರು,ಫೆ. 16:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆಬ್ರವರಿ 17 ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಆದೇಶಿಸಿದ್ದಾರೆ.

By admin

Leave a Reply

Your email address will not be published. Required fields are marked *

error: Content is protected !!