ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ಬುಧವಾರ ದೆಹಲಿಯಲ್ಲಿ ಪಕ್ಷದ ಸಭೆ ಕರೆಯಲಾಗಿದ್ದು, ನಾನೂ ಭಾವಹಿಸುತ್ತೇನೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ನಾಯಕರ ಮನಸ್ಸಿನಲ್ಲಿ ಏನಿದೆಯೋ ತಿಳಿದಿಲ್ಲ. ಟಿಕೆಟ್‌ ಹಂಚಿಕೆಯಲ್ಲಿ ಅವರ ತೀರ್ಮಾನವೇ ಅಂತಿಮ. ಬಿಜೆಪಿ–ಜೆಡಿಎಸ ಹೊಂದಾಣಿಕೆ ನಿಶ್ಚಿತವಾಗಿದೆ. ಆದರೆ ಸ್ಥಾನ ಹಂಚಿಕೆ ಅಂತಿಮವಾಗಿಲ್ಲ ಎಂದರು.

ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ.ಅವರ ಒಳ್ಳೆಯ ಕೆಲಸಗಳನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು ಹೇಳಿದರು.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿ ಕೈ ಸೇರಿ ಮೂರು ನಾಲ್ಕು ದಿನ ಕಳೆದರೂ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಎಫ್ಎಸ್ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.

By admin

Leave a Reply

Your email address will not be published. Required fields are marked *

error: Content is protected !!