ಬೆಂಗಳೂರು. ಮಂಗಳೂರು, (ಮಾರ್ಚ್ 14): ಲೋಕಸಭಾ ಚುನಾವಣೆ (Loksabha Elections 2024) ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್‌ ಪುತ್ತಿಲ (Arun Kumar Puthila) ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಇಂದು(ಮಾರ್ಚ್ 14) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಅರುಣ್ ಪುತ್ತಿಲ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಕೊನೆಗೂ ಯಶಸ್ವಿಯಾಗಿದ್ದು, ನಾಳೆ (ಮಾರ್ಚ್ 15) ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲಬಂದಂತಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್  ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು, ಇದೀಗ ಬಿಜೆಪಿಗೆ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಅಂತ್ಯವಾದಂತಾಗಿದೆ.

ಇನ್ನು ಪ್ರಮುಖವಾಗಿ ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಪಕ್ಷ ಪುತ್ತಿಲ ಅವರಿಗೆ ಯಾವ ಹುದ್ದೆ ನೀಡುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ. ಜಿಲ್ಲೆಯ ಏಳು ಮಂಡಲಗಳ ಪೈಕಿ ಬಾಕಿ ಇರುವ ಪುತ್ತೂರು ಮಂಡಲ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿವೆ.

By admin

Leave a Reply

Your email address will not be published. Required fields are marked *

error: Content is protected !!