ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1946ರ ಜನವರಿ 15ರಂದು ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಬಂಗೇರ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅವರು ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ

By admin

Leave a Reply

Your email address will not be published. Required fields are marked *

error: Content is protected !!