Category: Uncategorized

ಮಂಗಳೂರು: 10 ರೂ. ಆಸೆಯಿಂದ 20 ಸಾವಿರ ರೂ. ಕಳೆದುಕೊಂಡ ಮಹಿಳೆ-ಈ ಅಚಾತುರ್ಯ ನಡೆದಿದ್ದು ಹೇಗೆ?

ಮಂಗಳೂರು: ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ನಗರದ ಪಿವಿಎಸ್‌ ವೃತ್ತದ ಬಳಿ ಸೋಮವಾರ ಸಂಭವಿಸಿದೆ. ಮಹಿಳೆಯೋರ್ವರು ಬೆಳಗ್ಗೆ 10.30ಕ್ಕೆ ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ಗೆ…

ವಿಟ್ಲ: ಅನಂತಾಡಿ ಗ್ರಾ.ಪಂ. ಅಧ್ಯಕ್ಷರ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ

ವಿಟ್ಲ: ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆಯಾಗಿದ್ದು, ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧ್ಯಕ್ಷ ಗಣೇಶ್ ಪೂಜಾರಿ(60) ಅವರು ರಸ್ತೆ ಬದಿಯ ಚರಂಡಿಯ ಶುಚೀಕರಣ ಮಾಡುತ್ತಿದ್ದಾಗ ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ…

ದ.ಕ ಜಿಲ್ಲೆಯಲ್ಲಿ ಜು.26ರಂದು ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆ ಹವಮಾನ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ ಮಾಡಿದೆ.…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಾಳೆ (ಜು.25) ಶಾಲೆ, ಪಿಯು, ಡಿಗ್ರಿ ಕಾಲೇಜುಗಳಿಗೂ ರಜೆ

ಮಂಗಳೂರು: ಕರಾವಳಿಯಲ್ಲಿ ವರುಣನ ಅರ್ಭಟ ಮುಂದುವರೆದಿದ್ದು ನಾಳೆ ಜುಲೈ 25ರ ಮಂಗಳವಾರದಂದು ಶಾಲೆ ಪಿಯು, ಡಿಗ್ರಿ ಕಾಲೇಜುಗಳಿಗೆ ರಜೆ ಫ಼ೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸೋಮವಾರದಂದು ಮಳೆಯ ಅಬ್ಬರ ಮುಂದುವರೆದಿದೆ. ಮಂಗಳವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ…

ಸುಳ್ಯ ತಾಲೂಕಿನಲ್ಲಿ ನಾಳೆ(ಜು.25) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ತಾಲೂಕಿನಲ್ಲಿ ದಾಖಲೆ ಮಳೆಯಾಗಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ,…

ಮಂಗಳೂರು: ಕೊಂಕಣಿ ಸಂಗೀತ ದಿಗ್ಗಜ ಕ್ಲೋಡ್ ಡಿ ಸೋಜ(67) ನಿಧನ

ಮಂಗಳೂರು, ಕೊಂಕಣಿ ಸಂಗೀತ ಲೋಕದ ಪ್ರಸಿದ್ಧ ಗಾಯಕ, ಗೀತರಚನೆಕಾರ ಮತ್ತು ಸಂಯೋಜಕ ಕ್ಲೌಡ್ ಡಿಸೋಜಾ ಅವರು ಜುಲೈ 2೪ರ ಸೋಮವಾರದಂದು ಅಲ್ಪಕಾಲದ ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. 61 ಸಂಗೀತ ‘ನೈಟ್ಸ್’ ಗಳನ್ನು ಕ್ಲೋಡ್ ಡಿ ಸೋಜ…

ಕಡಬದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕಡಬ ತಾಲೂಕಿನಲ್ಲಿ ಹೆಚ್ಚಿನ ಮಳೆ ಹಿನ್ನೆಲೆಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಿಗೆ ರಜೆಇಂದು (ಜು.24) ರಜೆ ಘೋಷಣೆ ಮಾಡಿದ ಕಡಬ ತಹಸೀಲ್ದಾರ್ಜಿಲ್ಲಾಧಿಕಾರಿಗಳಿಂದ ತಹಶೀಲ್ದಾರ್ ಅವರಿಗೆ ಅಧಿಕಾರಸಂದರ್ಭ ಗಮನಿಸಿ ರಜೆ ನೀಡಲು ಸೂಚಿಸಿದ್ದ ಜಿಲ್ಲಾಧಿಕಾರಿ

ಮಂಗಳೂರು: ಎಚ್ಚರ-ಎಚ್ಚರ: ಚಾಕಲೇಟ್ ಗಳಲ್ಲೂ ಇರುತ್ತೆ ಗಾಂಜಾ-ಮಾದಕ ವಸ್ತು ಮಿಶ್ರಿತ 100 ಕೆ.ಜಿ ಚಾಕೊಲೆಟ್‌ ವಶ

ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದ ಎರಡು ಕಡೆ ಮಾರಾಟ ಮಾಡಲಾಗುತ್ತಿದ್ದ ಸುಮಾರು100 ಕೆಜಿಯಷ್ಟು ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್…

ಸದನಕ್ಕೆ ಅಗೌರವ: ಶಾಸಕ ವೇದವ್ಯಾಸ್, ಭರತ್ ಸೇರಿ 10 ಶಾಸಕರು ಅಮಾನತು

ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿ, ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ (ಜುಲೈ 21)ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ. ಆರ್.ಅಶೋಕ್, ಆರಗ ಜ್ಞಾನೇಂದ್ರ,…

ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿ ಹರಿದಾಡುತ್ತಿದೆ: ಸರ್ಕಾರದಿಂದ ಅರ್ಜಿ ಫಾರ್ಮ್ ಬಿಡುಗಡೆ ಮಾಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ…

error: Content is protected !!