ದ.ಕ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ಗುರುವಾರವೂ ಯೆಲ್ಲೋ ಅಲರ್ಟ್

ಮಂಗಳೂರು: ದ.ಕ. ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ನಗರ ಮತ್ತು ಗ್ರಾಮೀಣ ಹಾಗೂ ಘಟ್ಟದ ತಪ್ಪಲು ಪ್ರದೇಶ ಸಹಿತ ಜಿಲ್ಲಾದ್ಯಂತ ಸತತ ಮಳೆಯಾಗಿದೆ. ಗುರುವಾರವೂ ದ.ಕ.ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಹವಾಮಾನ ಇಲಾಖೆಯು ಘೋಷಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದ ಬುಧವಾರ…

ಗಾಂಜಾ ಸೇವನೆ – ಐವರು ಆರೋಪಿಗಳು ಅರೆಸ್ಟ್

ಉಡುಪಿ : ಗಾಂಜಾ ಸೇವನೆಗೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.22 ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಣಿಯೂರು ಎಂಬಲ್ಲಿ ಮೂಳೂರಿನ ತುಫೇಲ್(19), ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ…

ಮೇಯರ್‌-ಉಪಮೇಯರ್‌ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಮಂಗಳೂರಿಗೆ ಸಾಮಾನ್ಯ ಅಭ್ಯರ್ಥಿಗೆ ಮೇಯರ್‌ ಸ್ಥಾನ

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್‌ ಮತ್ತು ಉಪಮೇಯರ್‌ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್‌ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನುಳಿದ ಮಹಾನಗರ ಪಾಲಿಕೆಯ…

ಉಡುಪಿ: ಶಾಲೆಯಿಂದ ಮನೆಗೆ ಮರಳುತ್ತಿದ್ದ ಬಾಲಕಿಗೆ ಬೀದಿನಾಯಿ ಗುಂಪು ದಾಳಿ-ಬಾಲಕಿ ಗಭೀರ

ಇಲ್ಲಿನ ಸ್ಥಳೀಯ ಶಾಲೆಯಲ್ಲಿ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳ ಗುಂಪೊಂದು ಎರಗಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಆ. 24ರ ಬುಧವಾರ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ವಿಷಯ…

ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವನ ಶವ ಪತ್ತೆ

ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಸ್ನಾನ ಮಾಡಲು ನದಿಗೆ ಹರಿದ ಯುವಕ ನಾಪತ್ತೆಯಾಗಿದ್ದು, ಇದೀಗ ಯುವಕನ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ನಿವಾಸಿ ಶಿವು ಮೃತಪಟ್ಟ ಯುವಕ. ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ 20 ಮಂದಿ ಸ್ನೇಹಿತರ ಜೊತೆ ಆಗಮಿಸಿದ ಅವರು, ಇಲ್ಲಿನ ಕುಮಾರಧಾರ ಸ್ನಾನಘಟ್ಟದಲ್ಲಿ ನದಿಗಿಳಿದಿದ್ದರು.…

ಜರಿದು ಬಿದ್ದ ಬಂಟ್ವಾಳ ಪೊಲೀಸ್ ಠಾಣಾ ಕಂಪೌಂಡ್ – ಕಾರಿಗೆ ಹಾನಿ

ಬಂಟ್ವಾಳ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಗ್ರಾಮಾಂತರ ಪೊಲೀಸ್ ಠಾಣೆ ಕಂಪೌಂಡ್ ಗೋಡೆಯೊಂದು ಜರಿದು ಬಿದ್ದು ನಿಲ್ಲಿಸಿದ್ದ ಕಾರೊಂದು ಹಾನಿಗೊಳಗಾದ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಧಾರಾಕಾರ ಮಳೆಗೆ ಅನೇಕ ಹಾನಿಗಳಾಗಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಅಷ್ಟೇ ಅಲ್ಲದೆ…

ಸಾವರ್ಕರ್ ಅವರನ್ನು ಕಾಂಗ್ರೆಸ್-ಬಿಜೆಪಿಗರು ತಮ್ಮ ರಾಜಕೀಯ ಲಾಭಕ್ಕೆ ಬಳಸುತ್ತಿದ್ದಾರೆ-ಹಿಂದೂ ಮಹಾಸಭಾ

ಹಿಂದೂ ಮಹಾಸಭಾದ ಸ್ಥಾಪಕ ವೀರ ಸಾವರ್ಕರ್ ವಿಚಾರದಲ್ಲಿ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಗೊಂದಲ ಸೃಷ್ಠಿಸುತ್ತಿವೆ. ಕೇವಲ ರಾಜಕೀಯ ಲಾಭಕ್ಕಾಗಿ ಸಾವರ್ಕರ್ ಹೆಸರಲ್ಲಿ ಚಳುವಳಿ ಆರಂಭಿಸಲಾಗಿದೆ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾಡು ಹಂದಿ ದಾಳಿ-ತಂದೆ ಮಗ ಗಂಭೀರ

ಕಾಸರಗೋಡು, ಆ.24: ಕಾಡುಹಂದಿಗಳ (Wild boar) ಹಿಂಡು ಮೈಮೇಲೆ ಎರಗಿದ್ದರಿಂದ ತಂದೆ ಮತ್ತು ಮಗ ಗಂಭೀರ ಗಾಯಗೊಂಡ ಘಟನೆ ಬೋವಿಕ್ಕಾನ(Bovikanam)ದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಬೋವಿಕ್ಕಾನ ವ್ಯಾಪಾರಿ ಅಬ್ದುಲ್ಲ (57) ಹಾಗೂ ಪುತ್ರ ಫಝಲ್ ರಹ್ಮಾನ್ (24) ಗಾಯಗೊಂಡವರಾಗಿದ್ದಾರೆ. ಇವರಿಬ್ಬರು ಕಳೆದ ರಾತ್ರಿ…

ಫ್ಲೈ ಓವರ್ ನಲ್ಲಿ ಪ್ರವಹಿಸುತ್ತಿದೆ ವಿದ್ಯುತ್-ಏನಿದು ಅಚ್ಚರಿ

ಕುಂದಾಪುರ, ಕಳೆದ‌ ಮೂರು ದಿನಗಳಿಂದ ಬಿಡದೆ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ, ಹೆದ್ದಾರಿಯಲ್ಲಿನ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸಿರುವುದನ್ನು ಟೆಸ್ಟರ್ ಮೂಲಕ ತೋರಿಸಿದ ವಿಡಿಯೋವೊಂದು ವೈರಲ್ ಆಗಿ ಆತಂಕಕ್ಕೆಡೆಮಾಡಿಕೊಟ್ಟ ಘಟನೆ ಕುಂದಾಪುರದ ಹೃದಯಭಾಗದಲ್ಲಿರುವ ಫ್ಲೈ ಓವರ್ ನಲ್ಲಿ…

ತಲೆಮರೆಸಿಕೊಂಡಿದ್ದ ದನಗಳ್ಳತನ ಪ್ರಕರಣದ ಆರೋಪಿ ಅರೆಸ್ಟ್

ಮಂಗಳೂರು: ದನಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಬ್ದುಲ್ ಕಬೀರ್ ಅಲಿಯಾಸ್ ಪಾರಿವಾಳ ಕಬೀರ್ (35) ಬಂಧಿತ ಆರೋಪಿಯಾಗಿದ್ದಾನೆ.ಈತ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯಲ್ಲಿ…

error: Content is protected !!